Top

ಬಸವಣ್ಣ ಪ್ರತಿಮೆಗೆ ಹಾರ ಹಾಕಬಾರದೆಂದು ಹೇಳಲು ಶೋಭಾ ಯಾರು?

ಬೆಂಗಳೂರು: ಕ್ರಾಂತಿಯೋಗಿ ಬಸವಣ್ಣ ಅವರ ಜಯಂತ್ಯೋತ್ವದ ದಿನದಂದು ಬಸವೇಶ್ವರ ಪುತ್ಥಳಿಗೆ ಹೂವಿನ ಹಾರ ಹಾಕಲು ಕಾಂಗ್ರೆಸ್ ನಾಯಕರಿಗೆ ಅವಕಾಶ ನೀಡುವುದಿಲ್ಲ ಎಂಬ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಗೃಹ ಸಚಿವ ರಾಮಲಿಂಗಾ ರೆಡ್ಡಿಯವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಶೋಭಾ ಕರಂದ್ಲಾಜೆಯವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ರಾಮಲಿಂಗಾ ರೆಡ್ಡಿಯವರು, ಹಾರ ಹಾಕಬಾರದು ಎಂದು ಹೇಳಲು ಶೋಭಾ ಕರಂದ್ಲಾಜೆ ಯಾರು? 12ನೇ ಶತಮಾನದ ತತ್ತ್ವಜ್ಞಾನಿ ಬಸವೇಶ್ವರ ಅವರು ಶೋಭಾ ಕರಂದ್ಲಾಜೆಯವರ ಆಸ್ತಿಯಲ್ಲ ಎಂದು ಹೇಳಿದ್ದಾರೆ.

ಬಳಿಕ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಆರೋಪ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ನಿನ್ನೆ ರಾತ್ರಿ ಹಾವೇರಿಯಲ್ಲಿ ಅನಂತ್ ಕುಮಾರ್ ಹೆಗಡೆಯವರ ಕಾರು ಅಪಘಾತಕ್ಕೀಡಾಗಿತ್ತು. ಲಾರಿಯೊಂದು ಅನಂತ್ ಕುಮಾರ್ ಅವರ ಕಾರಿಗೆ ಡಿಕ್ಕಿ ಹೊಡೆದಿದ್ದು, ಕೂದಲೆಳೆ ಅಂತರದಲ್ಲಿ ಹೆಗಡೆಯವರು ಪ್ರಾಣಾಪಾಯದಿಂದ ಪಾರಾಗಿದ್ದರು. ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ್ದ ಹೆಗಡೆಯವರು, ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದರು.

Next Story

RELATED STORIES