Top

ನದಿಗೆ ಉರುಳಿಬಿದ್ದ ಮಿನಿ ಟ್ರಕ್, 21 ಸಾವು, 30 ಜನರಿಗೆ ಗಾಯ

ಮೃತರ ಕುಟುಂಬಕ್ಕೆ ರೂ.2 ಲಕ್ಷ, ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಿಸಿದ ಮಧ್ಯಪ್ರದೇಶ ಸಿಎಂ ಚೌಹಾಣ್

ಭೋಪಾಲ್: ಮಿನಿ ಟ್ರಕ್ ವೊಂದು ನದಿಗೆ ಉರುಳಿಬಿದ್ದಿ ಪರಿಣಾಮ ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 30ಕ್ಕೂ ಅಧಿಕ ಜನರಿಗೆ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಅಮೆಲಿಯಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮದುವೆ ಸಮಾರಂಭಕ್ಕೆ ತೆರಳುವ ಸಲುವಾಗಿ 45 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಂಕ್ ವೊಂದು ಸಿಂಗ್ರೌಲಿ ಜಿಲ್ಲೆಯಿಂದ ಸಿಧಿ ಜಿಲ್ಲೆಗೆ ಬರುತ್ತಿತ್ತು. ಈ ವೇಳೆ ಟ್ರಕ್ ಮೇಲಿನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾನೆ. ಈ ವೇಳೆ ದುರ್ಘಟನೆ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಆರಂಭಿಸಿದ್ದಾರೆಂದು ತಿಳಿದುಬಂದಿದೆ.

ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿು ಶಿವರಾಜ್ ಸಿಂಗ್ ಚೌಹಾಣ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ.

Next Story

RELATED STORIES