Top

ಕಾಂಗ್ರೆಸ್ ವಿರುದ್ಧ ಯೋಗಿ ಆದಿತ್ಯನಾಥ್ ಕಿಡಿ

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ರಂಗೇರಿದ್ದು ಇಂದು ಬಿಜೆಪಿಯ ಫೈರ್ ಬ್ರ್ಯಾಂಡ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರವನ್ನ ನಡೆಸಿದರು. ಶಿರಸಿಯಿಂದ ಹೆಲಿಕ್ಯಾಪ್ಟರ್ ಮೂಲಕ ಸಾಗರಕ್ಕೆ ಆಗಮಿಸಿದ ಯೋಗಿ ಆದಿತ್ಯನಾಥ್, ಪೂರ್ವನಿಗದಿಯಂತೆ ಶ್ರೀ ರಾಘವೇಶ್ವರ ಸ್ವಾಮೀಜಿ ಜೊತೆ ಸಮಾಲೋಚನೆ ನಡೆಸಿದರು. ಗೋ ಸಂರಕ್ಷಣೆ ಬಗ್ಗೆ ಶ್ರೀಗಳು ನಡೆಸುತ್ತಿರುವ ಕಾರ್ಯಕ್ರಮಗಳು ಹಾಗೂ ಅಭಿಯಾನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡ ಯೋಗಿ ಆದಿತ್ಯನಾಥ್‌ರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತ ಕೋರಿದರು. ಬಳಿಕ ಮಾತನಾಡಿದ ಯೋಗಿ ಆದಿತ್ಯನಾಥ್ ರಾಜ್ಯ ಸರ್ಕಾರದ ವಿರುದ್ಧ, ಸಿಎಂ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದರು. ಕರ್ನಾಟಕ ಭೂಮಿ ಇಷ್ಟು ಸಮೃದ್ಧಿಯಾಗಿರಲು ಇಲ್ಲಿನ ಜನ ಗೋ ರಕ್ಷಣೆ ಹಾಗೂ ಗೋ ಪೂಜೆ ಮಾಡುತ್ತಿರುವುದೇ ಕಾರಣ. ಕಾಂಗ್ರೆಸ್ ಮುಕ್ತ ಕರ್ನಾಟಕ ಇಂದಿನ ತುರ್ತು ಅಗತ್ಯ. ಜಿಹಾದಿಗಳಿಂದ ರಕ್ಷಣೆ ಬೇಕಾದ್ರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಬೇಕಿದೆ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರವಾಗಿದ್ದು ಬಿಜೆಪಿ ಅಧಿಕಾರಕ್ಕೆ ತಂದು ಸಿದ್ದರಾಮಯ್ಯ ಸರ್ಕಾರವನ್ನು ತೊಲಗಿಸಬೇಕು ಅಂತ ಯೋಗಿ ಕರೆ ನೀಡಿದರು..

ಇನ್ನೂ ತನ್ನ ಭಾಷಣದ ಪ್ರಾರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ ಯೋಗಿ, ಕೊನೆಯಲ್ಲೂ ಕಾಂಗ್ರೆಸ್ ಸೋಲಿಸಿ ಬಿಜೆಪಿ ಗೆಲ್ಲಿಸಿ ಎಂದು ಕನ್ನಡದಲ್ಲಿಯೇ ಹೇಳುವ ಮೂಲಕ ಗಮನ ಸೆಳೆದರು. ಇನ್ನು ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯನವರನ್ನ ಕಿಡಿಕಾರಿದ ಯೋಗಿ ಉತ್ತರ ಪ್ರದೇಶದ ಸರ್ಕಾರಕ್ಕೂ ತನ್ನ ಸರ್ಕಾರಕ್ಕೂ ಇರುವ ವ್ಯತ್ಯಾಸ ಬಗ್ಗೆ ಹೇಳಿದ್ದು ರೈತರ ಆತ್ಮಹತ್ಯೆ ಬಗ್ಗೆ ಸಹ ಕಿಡಿಕಾರಿದರು.

Next Story

RELATED STORIES