Top

ಹೈದರಾಬಾದ್-ಕರ್ನಾಟಕದಲ್ಲಿ ರಾಹುಲ್ ಗಾಂಧಿ ಅಬ್ಬರ

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಸ್ಟಾರ್ ಕ್ಯಾಂಪೇನರ್‌ಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಒಂದೆಡೆ ಬಿಜೆಪಿ ಪರ ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್ ಪ್ರಚಾರ ನಡೆಸುತ್ತಿದ್ದರೆ. ಹೈದ್ರಾಬಾದ್ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರು. 2 ದಿನ ಪ್ರಚಾರ ಕೈಗೊಂಡಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೈದ್ರಾಬಾದ್ ಕರ್ನಾಟಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಮೊದಲು ಬೀದರ್‌ಗೆ ಆಗಮಿಸಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಕುಮಾರ್ ಕೌಡಾಳ್ ಪರ ಪ್ರಚಾರ ಮಾಡಿದರು.

ಔರಾದ್​ನ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್ ದೇಶದ ಬಡವರ ಶಕ್ತಿಯಾಗಿದೆ. ಯಡಿಯೂರಪ್ಪ ಭ್ರಷ್ಟ ಸಿಎಂ ಅಭ್ಯರ್ಥಿ.. ಯಡಿಯೂರಪ್ಪ ವಿರುದ್ದ ಅನೇಕ ಭ್ರಷ್ಟಾಚಾರ ಆರೋಪಗಳಿವೆ ಅಂತ ಬಿಎಸ್ ಯಡಿಯೂರಪ್ಪ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಕರ್ನಾಟಕದಲ್ಲಿ ಉದ್ದುದ್ದ ಭಾಷಣ ಮಾಡುತ್ತಾರೆ.. ಆದರೆ, ನಿಮ್ಮ ಪಕ್ಷದಲ್ಲಿರುವ ಭ್ರಷ್ಟರ ಬಗ್ಗೆ ಯಾವ ಕ್ರಮ ತೆೆಗೆದುಕೊಂಡಿದ್ದೀರಾ? ಅಂತ ಮೋದಿಗೆ ರಾಹುಲ್ ಪ್ರಶ್ನಿಸಿದರು.

ಬಳಿಕ ಭಾಲ್ಕಿಯ ಭೀಮಣ್ಣ ಖಂಡ್ರೆ ಗ್ರೌಂಡ್​ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು. ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಯಾವತ್ತಿಗೂ ನುಡಿದಂತೆ ನಡೆದಿಲ್ಲ. ಸಿದ್ದರಾಮಯ್ಯ ಸರ್ಕಾರ ಹಲವಾರು ಯೋಜನೆಗಳನ್ನ ಜಾರಿಗೆ ತಂದಿದೆ ಅಂತ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಹುಮ್ನಾಬಾದ್​ನ ಮೈದಾನದಲ್ಲಿ ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಿದರು.

ಪ್ರಧಾನಿ ಮೋದಿಯನ್ನೇ ಟಾರ್ಗೆಟ್ ಮಾಡಿರುವ ರಾಹುಲ್ ಗಾಂಧಿ ಮೋದಿ ಹೋದಲ್ಲೆಲ್ಲ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ತರಲೇ ಬೇಕೆಂದು ರಾಹುಲ್ ಪಣ ತೊಟ್ಟಿದ್ದಾರೆ.

Next Story

RELATED STORIES