Top

ಜಯನಗರ ಶಾಸಕ ವಿಜಯ್ ಕುಮಾರ್ ಇನ್ನಿಲ್ಲ

ಜಯನಗರ ಬಿಜೆಪಿ ಶಾಸಕ ವಿಜಯ್ ಕುಮಾರ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವಿಜಯ್ ಕುಮಾರ್ , ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸ್ಪಷ್ಟನೆ ನೀಡಿದ್ದು, ವಿಜಯ್ ಕುಮಾರ್ ಅವರನ್ನು ಆಸ್ಪತ್ರೆಗೆ ಕರೆತಂದಾಗ, ಹೃದಯ ಬಡಿತ, ಬಿಪಿ ಕುಸಿತ ಕಂಡಿತ್ತು. ವೈದ್ಯರು ಅವರನ್ನು ಬದುಕಿಸಲು ಶತಪ್ರಯತ್ನ ಪಟ್ಟರೂ , ಚಿಕಿತ್ಸೆ ಫಲಿಸದೇ ವಿಜಯ್ ಕುಮಾರ್ ಕಳೆದ ರಾತ್ರಿ ಸಾವನ್ನಪ್ಪಿದ್ದಾರೆ.

ಕೇಂದ್ರ ಸಚಿವ ಅನಂತ್ ಕುಮಾರ್ , ಮಾಜಿ ಡಿಸಿಎಂ ಆರ್.ಅಶೋಕ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ವಿಜಯ್ ಕುಮಾರ್ ಅವರ ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು. ಇನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯಂತೆ ಅಂತಿಮಸಂಸ್ಕಾರ ನಡೆಸಿದ್ದು, ಕುಶಾಲತೋಪು ಸಿಡಿಸಿ ಗೌರವ ಸಮರ್ಪಿಸಲಾಯಿತು.

Next Story

RELATED STORIES