Top

ನಟ ಪ್ರಕಾಶ್ ಶಾಸಕ ಜಿಗ್ನೇಶ್ ವಿರುದ್ಧ ಎಫ್ಐಆರ್

ನಟ ಪ್ರಕಾಶ್ ರೈ ಮತ್ತು ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ 143, 147, 341, 188, 149 ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ, ಸಂವಿಧಾನ ಉಳಿವಿಗಾಗಿ ಕರ್ನಾಟಕ ಹಾಗೂ ಹೋರಾಟ ಗೀತೆ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.ಆದ್ರೆ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯದ ಹಿನ್ನೆಲೆ, ಪ್ರಕಾಶ್ ರೈ ಮತ್ತು ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಕೂಡ ಕಾರ್ಯಕ್ರಮ ನಡೆಸಿದ ಹಿನ್ನೆಲೆ, ರೈ ಮತ್ತು ಮೇವಾನಿ ಸೇರಿದಂತೆ 15ಕ್ಕೂ ಹೆಚ್ಚು ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Next Story

RELATED STORIES