Top

ಸೋಮವಾರದೊಳಗೆ 4 ಟಿಎಂಸಿ ಕಾವೇರಿ ನೀರು ಬಿಡಲು ಸುಪ್ರೀಂಕೋರ್ಟ್ ಆದೇಶ: ಕೇಂದ್ರದ ಮೇಲೆ ಕೆಂಗಣ್ಣು

ನವದೆಹಲಿ: ತಮಿಳುನಾಡಿಗೆ ಸೋಮವಾರದೊಳಗೆ 4 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ. ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ತಡ ಮಾಡುತ್ತಿರುವ ಬಗ್ಗೆ ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಗುರುವಾರ ಈ ಆದೇಶ ಹೊರಡಿಸಿದೆ. ಇದೇ ವೇಳೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ವರದಿ ನೀಡದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್​ ಚನಾವಣಾ ಪ್ರಚಾರಕ್ಕೆ ಹೋಗಲು ಸಮಯ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಇರುವುದರಿಂದ ಕರ್ನಾಟಕ ಮುಖ್ಯಮಂತ್ರಿ ಹಾಗೂ ಸಚಿವರು ಅಭಿಪ್ರಾಯ ಪಡೆಯಲು ಸಾಧ್ಯವಾಗಿಲ್ಲ. ಅವರ ಅಭಿಪ್ರಾಯ ದೊರೆತ ಕೂಡಲೇ ವರದಿ ಸಲ್ಲಿಸುವುದಾಗಿ ಅಟಾರ್ನಿ ಜನರಲ್ ಸುಪ್ರೀಂಕೋರ್ಟ್​ ವಿವರ ನೀಡಿದರು. ಈ ವಿವರದಿಂದ ಅಸಮಾಧಾನಗೊಂಡ ನ್ಯಾಯಮೂರ್ತಿಗಳು, ಪ್ರಧಾನಿ ಹಾಗೂ ಕೇಂದ್ರ ಸಚಿವರು ಕೂಡ ಚುನಾವಣಾ ಪ್ರಚಾರಕ್ಕಾಗಿ ಪ್ರವಾಸದಲ್ಲಿ ಇದ್ದಾರಲ್ಲಾ? ಎಂದು ಪ್ರಶ್ನಿಸಿದರು.

Next Story

RELATED STORIES