Top

ದೇವೇಗೌಡರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆದೆ: ಮೋದಿ ವಿವಾದಾತ್ಮಕ ಹೇಳಿಕೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಹೇಳಿಕೆ ನೀಡಿದ್ದರು. ಆದರೆ ಅವರು ಹಾಗೆ ಮಾಡಿಕೊಳ್ಳದಂತೆ ನೋಡಿಕೊಂಡೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತುಮಕೂರಿನಲ್ಲಿ ಶನಿವಾರ ಬೆಳಗ್ಗೆ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್​ ಈ ಬಾರಿ ಮೂರನೇ ಸ್ಥಾನಕ್ಕೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೊತೆ ಮೊದಲೇ ಒಳ ಒಪ್ಪಂದ ಮಾಡಿಕೊಂಡಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಸೇರಿಕೊಂಡು ಅಧಿಕಾರ ಹಿಡಿದಿದೆ. ಈ ಬಗ್ಗೆ ದೇವೇಗೌಡರೇ ಉತ್ತರಿಸಬೇಕು ಎಂದರು.

ಆದರೆ ದೇವೇಗೌಡರು ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶ ತೊರೆಯುವುದಾಗಿ ಹೇಳಿದ್ದರೆ ಹೊರತು, ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿರಲಿಲ್ಲ. ಮೋದಿ ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

Next Story

RELATED STORIES