Top

ಮೋದಿ ಮಹದಾಯಿ ಪ್ರಸ್ತಾಪ: ಸಿದ್ದರಾಮಯ್ಯ ಟಾಂಗ್

ಮೋದಿ ಮಹದಾಯಿ ಪ್ರಸ್ತಾಪ: ಸಿದ್ದರಾಮಯ್ಯ ಟಾಂಗ್
X

ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಹದಾಯಿ ವಿವಾದ ಪ್ರಸ್ತಾಪಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.

ಗದಗದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ್ದರು. ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಕೊನೆಗೂ ಮಹದಾಯಿ ವಿವಾದ ಪ್ರಸ್ತಾಪಿಸಿದ್ದಕ್ಕೆ ಧನ್ಯವಾದಗಳು. ಕಾಂಗ್ರೆಸ್ ವಿರುದ್ಧ ಆರೋಪ ಮಾಡುವ ಬದಲು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ಪ್ರಧಾನಿ ಮೋದಿಯವರಿಗೆ ಮಹಾದಾಯಿ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಹಲವು ಬಾರಿ ಕೋರಿಕೊಂಡಿತ್ತು. ಗೋವಾ, ಕರ್ನಾಟಕ, ಮಹಾರಾಷ್ಟ್ರ ಸಿಎಂಗಳನ್ನು ಕರೆದು ಚರ್ಚಿಸಿ ಎಂದು ಕೋರಿತ್ತು. ಆದ್ರೆ ಇಲ್ಲಿತನಕ ಮೌನವಾಗಿದ್ದ ಮೋದಿಯವರು ಚುನಾವಣೆ ಸಮೀಪಿಸುತ್ತಿದ್ದಂತೆ, ಮಹಾದಾಯಿ ನದಿ ನೀರಿನ ವಿಷಯದಲ್ಲಿ ಈ ಮೂಗು ತೂರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Next Story

RELATED STORIES