Top

ಯಾವುದೇ ಪಕ್ಷದ ಜೊತೆ ಒಳಒಪ್ಪಂದ ಇಲ್ಲ: ಸದಾನಂದಗೌಡ

ಮೈಸೂರು: ಹಲವಾರು ಪಕ್ಷಗಳಿಗೆ ಪ್ರಣಾಳಿಕೆ ಕೇವಲ ಚುನಾವಣೆಗೆ ಸೀಮಿತವಾಗಿರುತ್ತದೆ. ಆದ್ರೆ ಬಿಜೆಪಿಗೆ ಪ್ರಣಾಳಿಕೆ ಮುಂದಿನ ಐದು ವರ್ಷ ದಿಕ್ಸೂಚಿ ಇದ್ದ ಹಾಗೆ. ಬಿಜೆಪಿ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯ ಎಲ್ಲಾ ಯೋಜನೆಗಳನ್ನು ಈಡೇರಿಸಿದ್ದೇವೆ. ಈ ಬಾರಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಬಿಡುಗಡೆ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಜಿಲ್ಲೆಗೆ ಸಂಬಂಧಿಸಿದಂತೆ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸದಾನಂದಗೌಡ, ಕೃಷ್ಣರಾಜ ವಿಧಾನಸಭಾಕ್ಷೇತ್ರ, ನರಸಿಂಹರಾಜ ವಿಧಾನಸಭಾ ಕ್ಷೇತ್ರ, ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇನ್ನು ಬಿಜೆಪಿ ಜೆಡಿಎಸ್ ಒಳಒಪ್ಪಂದ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಡಿವಿಎಸ್, ನಾವು ಯಾವುದೇ ಪಕ್ಷದ ಜೊತೆ ಒಳಒಪ್ಪಂದ ಮಾಡಿಕೊಂಡಿಲ್ಲ. ಬಿಜೆಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು

Next Story

RELATED STORIES