Top

ಕರ್ನಾಟಕ ಸೇರಿ 13 ರಾಜ್ಯಗಳಲ್ಲಿ ಮಳೆ, ಬಿರುಗಾಳಿ: ಎಚ್ಚರಿಕೆ

ಕರ್ನಾಟಕ ಸೇರಿದಂಎ 13 ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಬಿರುಗಾಳಿ ಹಾಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜಸ್ಥಾನ ಹಾಗೂ ಉತ್ತರ ಪ್ರದೇಶದಲ್ಲಿ ಚಂಡಮಾರುತ, ಸಿಡಿಲು ಹಾಗೂ ಭಾರೀ ಮಳೆಯಿಂದಾಗಿ 124ಕ್ಕೂ ಹೆಚ್ಚು ಮಂದಿ ಮೃತಪಟ್ಟು 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಲ್ಲದೇ ಸಾಕಷ್ಟು ಪ್ರಮಾಣದಲ್ಲಿ ಆಸ್ತಿ-ಪಾಸ್ತಿ ನಷ್ಟ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೊರಾಂ, ತ್ರಿಪುರ, ಕರ್ನಾಟಕ ಮತ್ತು ಕೇರಳದಲ್ಲಿ ಬಿರುಗಾಳಿ ಹಾಗೂ ಮಳೆಯಾಗುವ ಸಾಧ್ಯತೆ ಇದೆ.ಹವಾಮಾನ ಇಲಾಖೆ ವರದಿ ಹಿನ್ನೆಲೆಯಲ್ಲಿ ಹರಿಯಾಣದಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Next Story

RELATED STORIES