Top

ಪ್ರಧಾನಿ ಮೋದಿಗೆ ಲೀಗಲ್ ನೋಟಿಸ್ ಕಳುಹಿಸಲು ಸಿದ್ದರಾಮಯ್ಯ ಚಿಂತನೆ

ರಾಜ್ಯ ಸರಕಾರದ ವಿರುದ್ಧ ಹಾಗೂ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ಲೀಗಲ್ ನೋಟಿಸ್ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ತಮ್ಮ ವಿರುದ್ಧ ವೈಯಕ್ತಿಕವಾಗಿ ಕೀಳುಮಟ್ಟದ ಭಾಷೆ ಬಳಸಿ ನಿಂದಿಸಿದ್ದಾರೆ. ಅಲ್ಲದೇ ಸರಕಾರದ ವಿರುದ್ಧವೂ ಯಾವುದೇ ಸಾಕ್ಷ್ಯಧಾರ ಇಲ್ಲದೇ ನಿಂದನೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ಮೋದಿ ನಡುವಿನ ಚುನಾವಣಾ ಸಮರ ವಿಕೋಪಕ್ಕೆ ತಿರುಗಿದೆ.

ಲೀಗಲ್​ ನೋಟಿಸ್​ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ತಮ್ಮ ಹೇಳಿಕೆಗಳನ್ನು ಹಿಂಪಡೆದು ಕ್ಷಮೆಯಾಚಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಗಿದೆ.

Next Story

RELATED STORIES