Top

ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಕಾಮುಕರ ಅಟ್ಟಹಾಸ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಕಾಮುಕರ ಅಟ್ಟಹಾಸ ಮುಂದುವರೆದಿದೆ. ರಸ್ತೆ ಮೇಲೆ ಪತಿಯ ಜೊತೆ ನಡೆದು ಹೋಗ್ತಿದ್ದ ಮಹಿಳೆಯ ಜೊತೆ ಕಾಮುಕನೋರ್ವ ಅಸಭ್ಯವಾಗಿ ನಡೆದುಕೊಂಡಿದ್ದಾನೆ.ಬಿಟಿಎಂ ಲೇಔಟ್ ನ ಹೋಟೆಲ್ ಒಂದರಲ್ಲಿ ರಾತ್ರಿ ಊಟ ಮುಗಿಸಿ ದಂಪತಿ ಮನೆ ಕಡೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮದ್ಯಪಾನ ಮಾಡಿ ಬಂದಿದ್ದ, ಮಹಾರಾಷ್ಟ್ರ ಮೂಲದ ಯುವಕನೊಬ್ಬ ಪತಿಯ ಜೊತೆ ತೆರಳುತ್ತಿದ್ದ ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ್ದಾನೆ. ಅಷ್ಟೇ ಅಲ್ಲದೇ ಮಹಿಳೆಯ ಟೀ ಶರ್ಟ್ ಹಿಡಿದೆಳೆದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದರಿಂದ ಎಚ್ಚೆತ್ತ ಸ್ಥಳೀಯರು, ಮಹಾರಾಷ್ಟ್ರ ಮೂಲದ ಯುವಕನನ್ನು ಹಿಡಿದು ಥಳಿಸಿ, ಜೆ.ಪಿ.ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Next Story

RELATED STORIES