Top

ದೇಶ ದುಸ್ಥಿತಿಯಲ್ಲಿದ್ದರೂ ಸುಳ್ಳು ಹೇಳುತ್ತಿರುವ ಮೋದಿ: ಸೋನಿಯಾ ವಾಗ್ದಾಳಿ

ದೇಶದಲ್ಲಿ ಪೆಟ್ರೋಲ್​, ಡೀಸೆಲ್ ದರ ಏರಿಕೆಯಿಂದ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಬರಗಾಲ ಸೇರಿದಂತೆ ನಾನಾ ಸಮಸ್ಯೆಗಳಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕೆಟ್ಟ ತೀರ್ಮಾನಗಳಿಂದ ದೇಶದ ಆರ್ಥಿಕ ಸ್ಥಿತಿ ದುಸ್ಥಿತಿಯಲ್ಲಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರದ ಒಬಳೇಶ್ವೆರದಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನಂತರ ಭೇಟಿ ನೀಡಿದ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಕ್ತ ಮಾಡಲು ಹೊರಟ್ಟಿದ್ದೀರಿ. ಅದಕ್ಕೂ ಮುನ್ನ ನಿಮ್ಮ ಪರಿಸ್ಥಿತಿ ನೋಡಿಕೊಳ್ಳಿ ಎಂದು ಪರೋಕ್ಷವಾಗಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಟಾಂಗ್ ನೀಡಿದರು.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ಕರ್ನಾಟಕಕ್ಕೆ ಯಾವುದೇ ನೆರವು ನೀಡಿಲ್ಲ. ಕೇಂದ್ರದ ಸಹಾಯವಿಲ್ಲದೇ ಸಿದ್ದರಾಮಯ್ಯ ಸರಕಾರ ಹಲವಾರು ಮಹತ್ವದ ಯೋಜನೆಗಳನ್ನು ನೀಡಿ ಅಭಿವೃದ್ಧಿ ಮಾಡಿದೆ ಎಂದು ಸೋನಿಯಾ ಆರೋಪಿಸಿದರು.

ಮೋದಿ ಚೆನ್ನಾಗಿ ಭಾಷಣ ಮಾಡುತ್ತಾರೆ. ಆದರೆ ಭಾಷಣದಿಂದ ಅಭಿವೃದ್ಧಿ ಸಾಧ್ಯವಿಲ್ಲ. ದಲಿತರು, ರೈತರಿಗೆ, ಯುವಕರಿಗೆ ಏನು ಮಾಡಿದ್ದಾರೆ? ಎಲ್ಲಿಗೆ ಹೋದರೂ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಸೋನಿಯಾ ಆಕ್ರೋಶ ವ್ಯಕ್ತಪಡಿಸಿದರು.

Next Story

RELATED STORIES