Top

ಬೆಂಗಳೂರಿನಲ್ಲಿ ಚುನಾವಣಾ ವಿಚಕ್ಷಣ ದಳದ ದಾಳಿ : 15 ಸಾವಿರ ಮತದಾರರ ಚೀಟಿ ವಶ

ಬೆಂಗಳೂರು : ಮತದಾರರ ಗುರುತಿನ ಚೀಟಿಯನ್ನು ಸಂಗ್ರಹಿಸುತ್ತಿದ್ದ ಆರೋಪಿಗಳನ್ನು ರಾಜರಾಜೇಶ್ವರಿ ನಗರದ ಎಸ್ ಎಲ್ ವಿ ಅಪಾರ್ಟ್ ಮೆಂಟ್ ಬಳಿ, ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಬಂದಿಸಿದ್ದಾರೆ.

ಹಣದ ಆಮಿಷ ತೋರಿಸಿ, ಜನರಿಂದ ಗುರುತಿನ ಚೀಟಿ ಪಡೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು, ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಅಲ್ಲದೇ ಅವರಿಂದ 15 ಸಾವಿರದಷ್ಟು ಮತದಾರರ ಗುರುತಿನ ಚೀಟಿ, ಹಾಗೂ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ. ಅಂದಹಾಗೇ, ಬಂದಿತರನ್ನು ರಾಜರಾಜೇಶ್ವರಿ ನಗರದ ನಿವಾಸಿಗಳು ಎಂದು ಗುರುತಿಸಲಾಗಿದೆ.

ಈ ಪ್ರಕರಣ ಸಂಬಂಧ, ಬಂದಿತರು ಕಾಂಗ್ರೆಸ್ ಕಾರ್ಯಕರ್ತರು ಎಂದು ಬಿಜೆಪಿ ಆರೋಪಿಸಿದರೇ, ಬಿಜೆಪಿ ಕಾರ್ಯಕರ್ತರು ಎಂದು ಕಾಂಗ್ರೆಸ್ ಆರೋಪಿಸಿದೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದೀಗ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Next Story

RELATED STORIES