Top

ರಾಜ್ಯದಲ್ಲಿ ಇಂದು, ನಾಳೆ ಬಾರಿ ಮಳೆ : ಹವಾಮಾನ ಇಲಾಖೆ ಸೂಚನೆ

ಬೆಂಗಳೂರು : ಕಳೆದ ಹಲವು ದಿನಗಳಿಂದ ಆಗಾಗ ತಂಪೆರೆದ ಮಳೆರಾಯ, ನಗರದಲ್ಲಿ ಮತ್ತೆ ಎರಡು ದಿನಗಳ ಕಾಲ ತಂಪೆರೆಯಲು ಬರುತ್ತಾ ಇದ್ದಾನೆ. ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ, ಚೆನೈ ಹಾಗೂ ಅರಬ್ಬಿ ಸಮುದ್ರದಲ್ಲಿ ಮೋಡಗಳ ಸಾಲು ನಿರ್ಮಾಣದ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸೂಚನೆ ನೀಡಿದ್ದಾರೆ.

ಈ ಕುರಿತು ಟಿವಿ5 ಕನ್ನಡಕ್ಕೆ ಮಾಹಿತಿ ನೀಡಿದ ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ರೆಡ್ಡಿ, ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ.

Next Story

RELATED STORIES