Top

ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ರೋಡ್ ಶೋ

ಬೆಳಗಾವಿ : ಜಿಲ್ಲೆಯ ಗ್ರಾಮೀಣ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳಕರ ಅಬ್ಬರದ ಚುನಾವಣಾ ಪ್ರಚಾರ ನಡೆಸಿದ್ರು. ತೆರೆದ ವಾಹನದಲ್ಲಿ ಲಕ್ಷ್ಮಿ ಹೆಬ್ಬಾಳಕರ ಗ್ರಾಮೀಣ ಮತಕ್ಷೇತ್ರದ ಮಾವೀನಕಟ್ಟಿ ಗ್ರಾಮದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿದ್ರು. ಲಕ್ಷ್ಮಿ ಹೆಬ್ಬಾಳಕರ ರೋಡ್ ಶೋದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ರು.

ರೋಡ್ ಶೋ ಬಳಿಕ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಸರ್ವಾಗೀಂಣ ಅಭಿವೃದ್ಧಿಗೆ ಬದ್ಧವಾಗಿದ್ದೇನೆ.. ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸಿಕೊಡುವೆ... ಹೀಗಾಗಿ ಈ ಭಾರಿ ಕಾಂಗ್ರೆಸ್ಗೆ ಮತ ನೀಡುವ ಮೂಲಕ ತಮ್ಮನ್ನ ಆಯ್ಕೆ ಮಾಡಬೇಕೆಂದು ಮನವಿ ಮಾಡಿದ್ರು.

Next Story

RELATED STORIES