Top

ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರ ಬಂಧನ : 10 ಲಕ್ಷಕ್ಕೂ ಹೆಚ್ಚು ಹಣ ವಶ

ಬೀದರ್ : ಇಂದು ಭಹಿರಂಗ ಚುನಾವಣಾ ಪ್ರಚಾರಕ್ಕೆ ಕೊನೆಯ ದಿನ. ಈ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಗಾಂಧಿಗಂಜ್ ಪೊಲೀಸರು ಬಂಧಿಸಿದ್ದಾರೆ.

ಬೀದರ್‌ನ ಗಾಂಧಿಗಂಜ್‌ನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಚುನಾವಣಾ ಅಧಿಕಾರಿಗಳು, ರೆಡ್ ಹ್ಯಾಂಡ್‌ ಆಗಿ, ಅಬ್ದುಲ್, ಸಮ್ಮದ್ ಎಂಬುವರನ್ನು ಬಂಧಿಸಿದ್ದಾರೆ. ಬಂದಿತರಿಂದ ಮತದಾರರಿಗೆ ಹಂಚುತ್ತಿದ್ದ, 500, ಎರಡು ಸಾವಿರ ಮುಖ ಬೆಲೆಯ 10 ಲಕ್ಷದ 50 ಸಾವಿರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಬಂದಿತ ಆರೋಪಿಗಳು ಕಾಂಗ್ರೆಸ್ ಅಭ್ಯರ್ಥಿ ರಹೀಂ ಖಾನ್‌ ಪರವಾಗಿ ಮತ ಹಾಕಲು ಹಣ ಹಂಚುತ್ತಿದ್ದರು ಎಂದು ತಿಳಿದು ಬಂದಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಗಾಂಧಿಗಂಜ್‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Next Story

RELATED STORIES