Top

ಗೋಣಿಕೊಪ್ಪದಲ್ಲಿ ಕೈ-ಕಮಲ ಕಾರ್ಯಕರ್ತರ ಬಡಿದಾಟ

ಕೊಡಗು : ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ. ನಿನ್ನೆ ರಾತ್ರಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾಗ ಕೈ-ಕಮಲ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದು, ಇಬ್ಬರು ಕೈ ಕಾರ್ಯಕರ್ತರು ಸೇರಿದಂತೆ ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.

ಕಬ್ಬಿಣದ ರಾಡ್ನಿಂದ ತೀವ್ರ ಹಲ್ಲೆಗೊಳಗಾಗಿರುವ ಗ್ರಾಮ ಪಂಚಾಯತ್ ಸದಸ್ಯ ಜಮ್ಮಂಡ ಸೋಮಣ್ಣ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದದ್ದು, ಹಾಗೆಯೇ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಕರ್ತಂಡ ಸೋಮಣ್ಣ, ವಿದ್ಯಾರ್ಥಿ ಪುನೀತ್ರನ್ನ ಕೂಡ ಮೈಸೂರಿನ ಬೃಂದಾವನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ರಾತ್ರಿ ಕೈ-ಕಮಲ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದ್ದು, ಕೊನೆಗೂ ಪರಿಸ್ಥಿತಿ ಹತೋಟಿಗೆ ಬಾರದಿದ್ದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಘಟನೆ ಸಂಬಂಧಿಸಿದಂತೆ ಎರಡು ಪಕ್ಷದ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಾಗಿದ್ದು, ಬಿಜೆಪಿಯ 5 ಹಾಗೂ ಕಾಂಗ್ರೆಸ್ನ 4 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ.

ಈ ಘರ್ಷಣೆ ಹಿನ್ನೆಲೆಯಲ್ಲಿ ಗೋಣಿಕೊಪ್ಪದಲ್ಲಿ ಬಿಗಿ ಪೊಲೀಸ್ ಬಂದ್ ಬಸ್ತ್ ಏರ್ಪಡಿಸಲಾಗಿದ್ದು, ಬೀದಿ ಬೀದಿಗಳಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನೂ ಘಟನೆಯಲ್ಲಿ ಮನೆಯ ಬಳಿ ನಿಂತಿದ್ದ, ನನ್ನ ಮಗನ ಮೇಲೆ ಪುಡಾರಿಗಳು ಹಲ್ಲೆ ಮಾಡಿದ್ದಾರೆ ಅಂತಾ ಗಾಯಾಳು ವಿದ್ಯಾರ್ಥಿ ಪುನೀತ್ ತಾಯಿ ಅಳಲು ತೋಡಿಕೊಂಡಿದ್ದಾರೆ. ಸದ್ಯ ಗೋಣಿಕೊಪ್ಪದಲ್ಲಿ ಬಿಗುವಿನ ವಾತವರಣ ಏರ್ಪಟ್ಟಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂದಂತಿದೆ.

Next Story

RELATED STORIES