Top

ಚುನಾವಣಾ ಅಕ್ರಮದಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಈಶ್ವರಪ್ಪ ಲೇವಡಿ

ಶಿವಮೊಗ್ಗ : ಚುನಾವಣಾ ಅಕ್ರಮ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದು ಶಿವಮೊಗ್ಗದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಐಡಿ ಕಾರ್ಡ್ ಮಾಡಲು ಅಪಾರ್ಟ್ಮೆಂಟ್ ಅನ್ನೇ ಕಾರ್ಖಾನೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ಕಾಂಗ್ರೆಸ್ಸಿಗರ ಅಕ್ರಮ ಜನರಿಗೆ ತಿಳಿದಿರುವುದರಿಂದಲೇ ದೇಶ ಕಾಂಗ್ರೇಸ್ ಮುಕ್ತವಾಗುತ್ತಿದೆ. ಹಾಗೇಯೇ ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಹೇಳಿದರು.

ಇತ್ತೀಚಿನ ಸಮೀಕ್ಷೆಗಳು ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಗಳಿಸಲಿದೆ‌ ಎನ್ನುತ್ತಿವೆ. ರಾಜ್ಯದಲ್ಲಿ ಚಾಣಕ್ಯ ಷಾ ಕಾರ್ಯವೈಖರಿಯ ಜೊತೆ ಚಂದ್ರಗುಪ್ತ ಮೋದಿಯ ಅಲೆ ಎದ್ದಿದ್ದು, ನಿರೀಕ್ಷೆಗೂ ಮೀರಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಲಿದೆ. ಕರ್ನಾಟಕದ ವಿಧಾನಸಭಾ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಯ ದಿಕ್ಸೂಚಿ ಎಂದು ಕಾಂಗ್ರೆಸ್ ನಾಯಕರೇ ಹೇಳುತ್ತಿದ್ದಾರೆ. ರಾಜ್ಯದಲ್ಲಿ ಹೆಚ್ಚು ಸ್ಥಾನ ಗಳಿಸಿ, ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ. ಅದೇ ರೀತಿ 2019 ರಲ್ಲಿ ಬಿಜೆಪಿ ಮತ್ತೋಮ್ಮೆ ಅಧಿಕಾರಕ್ಕೆ ಬರಲಿದ್ದು, ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Next Story

RELATED STORIES