Top

ನೀರಿನ ಟ್ಯಾಂಕರ್‌ನಲ್ಲಿ ಸಂಗ್ರಹಿಸಿದ್ದ, 28 ಲಕ್ಷ ಮೌಲ್ಯದ ಅಕ್ರಮ ಮದ್ಯ ಜಪ್ತಿ

ಯಾದಗಿರಿ : ಮೇ 12ಕ್ಕೆ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆೆಗೆ ಮತದಾನ ನಡೆಯಲಿದೆ. ಮತದಾರರನ್ನು ಒಲಿಸಿಕೊಳ್ಳಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿಯುತ್ತಿದ್ದಾರೆ. ಮದ್ಯ ನೀಡಿ ಮತದಾರರನ್ನು ಒಲಿಸಿಕೊಳ್ಳುವ ಅಭ್ಯರ್ಥಿಗಳ ಕನಸಿಗೆ, ಯಾದಗಿರಿ ಗ್ರಾಮೀಣ ಠಾಣೆಯ ಪೊಲೀಸರು ಬ್ರೇಕ್ ಹಾಕಿದ್ದಾರೆ..

ಹೌದು, ಯಾದಗಿರಿ ತಾಲೂಕಿನ ಮುದ್ನಾಳ ತಾಂಡಾದ ಬಳಿ ನೀರಿನ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಮದ್ಯವನ್ನು ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಮಾಹಿತಿ ಪಡೆದ ಎಸ್ಪಿ ಯಡಾ ಮಾರ್ಟಿನ್ ನೇತೃತ್ವದ ಪೊಲೀಸರು, ದಾಳಿ ನಡೆಸಿ, ಟ್ಯಾಂಕರ್ ಸಮೇಲೆ ಸಾವಿರಾರು ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

ಜಪ್ತಿ ಮಾಡಲಾಗಿರುವ ಮದ್ಯದ ಬೆಲೆ, 28 ಲಕ್ಷಕ್ಕೂ ಹೆಚ್ಚು ಮೌಲ್ಯದ್ದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಯಾದಗಿರಿ ಗ್ರಾಮೀಣ ಠಾಣೆಯ ಪೊಲೀಸರು, ತನಿಖೆ ಕೈಗೊಂಡಿದ್ದಾರೆ...

Next Story

RELATED STORIES