Top

ಪಕ್ಷೇತರ ಅಭ್ಯರ್ಥಿ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರಿನ ಕೆ.ಆರ್.ನಗರ ಪಕ್ಷೇತರ ಅಭ್ಯರ್ಥಿ ಮೇಲೆ ಅಟ್ಯಾಕ್ ಮಾಡಲಾಗಿದೆ. ತಡರಾತ್ರಿ ಕೆ.ಆರ್.ನಗರದ ಹೊಸ ಅಗ್ರಹಾರದ ಬಳಿ ಈ ಘಟನೆ ನಡೆದಿದ್ದು, ಹೊಸಳ್ಳಿ ವೆಂಕಟೇಶ್ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ. ಪ್ರಚಾರ ಮುಗಿಸಿ ಬರುವಾಗ, ವೆಂಕಟೇಶ್ ಕಾರನ್ನ ಅಡ್ಡಗಟ್ಟಿ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ವೆಂಕಟೇಶ್ ರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

Next Story

RELATED STORIES