Top

ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲು ಬಳ್ಳಾರಿಯಲ್ಲಿ ಪೂಜೆ

ಬಳ್ಳಾರಿ : ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭದ ಬೆನ್ನಲೆ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ರಾಜ್ಯದಲ್ಲಿ ಬಿಜೆಪಿ ಅತಿ ಹೆಚ್ಚು ಸೀಟುಗಳಿಂದ ಜಯಗಳಿಸಿ ಸರ್ಕಾರ ರಚಿಸಬೇಕು. ಅಂಥಾ ಬಿಜೆಪಿಯ ಕಾರ್ಯಕರ್ತರು ಕನಕದುರ್ಗಮ್ಮ ದೇವಾಲಯದಲ್ಲಿ ೧೦೧ ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ಇನ್ನೂ ರಾಜ್ಯದಲ್ಲಿ ಬಿಜೆಪಿಯ ಅಧಿಕಾರಕ್ಕೆ ಬರುವದರ ಜೋತೆಗೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಬೇಕು ಎಂದು ದುರ್ಗಾದೇವಿಯಲ್ಲಿ ಹರಕೆಯನ್ನು ಹೋತ್ತರು. ಇಂದು ಬಹಿರಂಗ ಪ್ರಚಾರಕ್ಕೆ ಅಂತ್ಯ ಹಿನ್ನಲೆಯಲ್ಲಿ ಈ ಪೂಜೆಯನ್ನು ಸಲ್ಲಿಸಿದರು. ಈ ಪೂಜೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಸಂಘದ ಸದಸ್ಯರು ಹಾಗೂ ಬಿಜೆಪಿಯ ಕಾರ್ಯಕರ್ತರು ಭಾಗವಹಿಸಿದ್ದರು.

Next Story

RELATED STORIES