Top

ವರುಣಾ ಕ್ಷೇತ್ರದ ಮತದಾರರಿಗೆ ದನಿಯಾಗಿರುತ್ತೇನೆ: ವಿಜಯೇಂದ್ರ

ಈ ಬಾರಿ ವರುಣಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮೆಲ್ಲ ಗೊಂದಲ ಮನಸ್ಠಾಪಗಳನ್ನು ಮೀರಿ ಮುಂದೆ ಸಾಗಿದ್ದೇವೆ. ಯಾರಿಗೆ ಯಾರ ಬಗ್ಗೆಯೂ ಮನಸ್ಠಾಪವಿಲ್ಲ. ಈ ಬಾರಿ ಚುನಾವಣೆಯಲ್ಲಿ ವರುಣಾ ಬಿಜೆಪಿ ಅಭ್ಯರ್ಥಿ ತೋಟದಪ್ಪ ಬಸವರಾಜು ಜಯಗಳಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ.

ಅಲ್ಲದೇ ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿದ ಫಲಿತಾಂಶ ಸಿಗಲಿದೆ. ನಾನು ಶಿವಮೊಗ್ಗ ಜಿಲ್ಲೆಯ ಜನರಿಗೆ ಪರಿಚಯವಿರಲಿಲ್ಲ. ನೇರವಾಗಿ ರಾಜಕೀಯ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರಲಿಲ್ಲ. ವರುಣಾಕ್ಕೆ ಬಂದ ನಂತರದಲ್ಲಿ ಜನ ಅಪಾರ ಪ್ರೀತಿ ತೋರಿಸಿದ್ದಾರೆ. ಇದಕ್ಕಾಗಿ ನಾನು ಯಾವ ರೀತಿ ಕೃತಜ್ಞತೆ ಸಲ್ಲಿಸಬೇಕು ಎಂದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಇದೇ ವೇಳೆ ಮಾತನಾಡಿರುವ ವಿಜಯೇಂದ್ರ, ನನಗೆ ಟಿಕಿಟ್ ತಪ್ಪಿರುವುದು ಬೇಸರವಿಲ್ಲ. ಒಳ್ಳೆಯ ಕೆಲಸ ಮಾಡಲು ಶಾಸಕ, ಮಂತ್ರಿ ಆಗಬೇಕಿಲ್ಲ. ಮುಂದಿನ ದಿನಗಳಲ್ಲೂ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ವರುಣಾ ಕ್ಷೇತ್ರದ ಮತದಾರರಿಗೆ ದನಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

Next Story

RELATED STORIES