Top

ಜೋರಾಗಿದೆ ಕುರುಡು ಕಾಂಚಾಣದ ಕುಣಿತ

ಚುನಾವಣೆಗೆ ಇನ್ನು ಒಂದು ದಿನ ಮಾತ್ರ ಬಾಕಿ ಇದೆ. ಈ ಸಮಯದಲ್ಲಿ ಮತದಾರನ ಮಮತ ಸೆಳೆಯಲು ಎಲ್ಲ ಪಕ್ಷದ ನಾಯಕರು ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ರಾಜಕಾರಣಿಗಳು ಚಾಪೆ ಕೆಳಗೆ ತೂರಿದರೆ, ಚುನಾವಣಾಧಿಕಾರಿಗಳು ರಂಗೋಲಿ ಕೆಳಗೆ ತೂರಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕುರುಡು ಕಾಂಚಾಣ ಕುಣಿತ, ಮದ್ಯದ ಹಾವಳಿ ಜೋರಾಗಿದ್ದು, ಹಲವೆಡೆ ಹಣ,ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ದಾಖಲೆ ಇಲ್ಲದ 17 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.ಇನ್ನೋವಾ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಕ್ಯಾಂಪ್ ನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಹಟ್ಟಿ ಠಾಣೆ ಪಿಎಸ್ ಐ ಮಹಮ್ಮದ್ ರಫೀಕ್ ನೇತೃತ್ವದಲ್ಲಿ 112.5 ಕೋಟಿ ನಗದು, 30ಕೋಟಿ ಮೌಲ್ಯದ ಮದ್ಯ, 65 ಕೋಟಿ ಮೌಲ್ಯದ ಸಾಮಾಗ್ರಿ ವಶಪಡಿಸಿಕೊಂಡಿದ್ದಾರೆ.ಅಲ್ಲದೇ ಮದ್ಯ ಮಾರಾಟದಲ್ಲಿ ತೊಡಗಿದ್ದ ರವಿಯನ್ನು ವಶಕ್ಕೆ ಪಡೆದಿದ್ದಾರೆ.ಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಕೋಲಾರ ಗಲ್ ಪೇಟೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಹೊರವಲಯದ ಕೊಂಡರಾಜನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ.ಸಿಮೆಂಟ್ ಲಾರಿಯಲ್ಲಿದ್ದ ಚೀಲದಲ್ಲಿ 70 ಲಕ್ಷ ಹಣ ಇಟ್ಟು ಸಾಗಿಸುತ್ತಿದ್ದು, ಹಣವನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಸಿಮೆಂಟ್ ಸಾಗಿಸಲು ಹೇಳಿದ್ದ ಹಾರ್ಡವೇರ್ ಶಾಪ್ ಮಾಲೀಕ ನಾಗರಾಜ್ ರನ್ನ ವಿಚಾರಣೆಗೊಳಪಡಿಸಲಾಗಿದ್ದು, ಕೋಲಾರ ಚುನಾವಣಾಧಿಕಾರಿ ಸುಭಾ ಕಲ್ಯಾಣ್ ರಿಂದ ಗಲ್ ಪೇೆಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹುಬ್ಬಳ್ಳಿಯಲ್ಲಿ ಪ್ರಚಾರದ ವೇಳೆ ಹಣ ಹಂಚಲಾಗಿದೆ.ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಸಿ.ಎಸ್.ಶಿವಳ್ಳಿ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗಿದೆ.ಹೀಗೆ ಹಲವಾರು ಕಡೆ ಪೊಲೀಸರು ದಾಳಿ ನಡೆಸಿ, ಲಕ್ಷಾಂತರ ರೂಪಾಯಿ ಹಣವನ್ನು, ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ 45ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ.

Next Story

RELATED STORIES