ಕೊಹ್ಲಿ, ಡಿವಿಲಿಯರ್ಸ್ ಅಬ್ಬರಕ್ಕೆ ಡೆಲ್ಲಿ ಢಮಾರ್

ಸಿಡಿಲಬ್ಬರದ ಬ್ಯಾಟ್ಸ್ಮನ್ಗಳಾದ ವಿರಾಟ್ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಅವರ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ 5 ವಿಕೆಟ್ಗಳಿಂದ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಬಗ್ಗುಬಡಿಯಿತು.
ಟಾಸ್ ಗೆದ್ದು ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 187 ರನ್ ಪೇರಿಸಿತು ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಆರ್ಸಿಬಿ ತಂಡ ಒಂದು ಓವರ್ ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಆರ್ಸಿಬಿ 16 ರನ್ಗೆ 2 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. ಆದರೆ ಕೊಹ್ಲಿ ಮತ್ತು ಡಿವಿಲಿಯರ್ಸ್ 3ನೇ ವಿಕೆಟ್ಗೆ 93 ರನ್ಗಳ ಜೊತೆಯಾಟ ನಿಭಾಯಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
ಕೊಹ್ಲಿ 40 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸೇರಿದ 70 ರನ್ ಬಾರಿಸಿ ಔಟಾದರೆ, ಡಿವಿಲಿಯರ್ಸ್ 37 ಎಸೆತಗಳಲ್ಲಿ 4 ಬೌಂಡರಿ ಹಾಗೂ 6 ಸಿಕ್ಸರ್ ಒಳಗೊಂಡ ಅಜೇಯ 72 ರನ್ ಸಿಡಿಸಿದರು.
ಇದಕ್ಕೂ ಮುನ್ನ ಡೆಲ್ಲಿ ಪರ ರಿಷಭ್ ಪಂತ್ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸೇರಿದಂತೆ 61 ರನ್ ಗಳಿಸಿದರೆ, ಅಭಿಷೇಕ್ ಶರ್ಮ 19 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ ಅಜೇಯ 46 ರನ್ ಸಿಡಿಸಿದರು.