ಬೆಂಗಳೂರಿನಲ್ಲಿ ಮೊಬೈಲ್ ಅಂಗಡಿಗೆ ಕನ್ನ
X
TV5 Kannada13 May 2018 9:22 AM GMT
ಬೆಂಗಳೂರು: ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಲು ಯತ್ನಿಸಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯ ಮಾಚೋಹಳ್ಳಿಯಲ್ಲಿ ನಡೆದಿದೆ. ಅಂಗಡಿಯ ಮೇಲ್ಛಾವಣಿ ಕೊರೆದು ಕಳ್ಳತನ ಮಾಡಲಾಗಿದ್ದು, ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಗೆ ಎಂಟ್ರಿ ಕೊಟ್ಟ ಕಳ್ಳ, ೪೦ ಸಾವಿರಕ್ಕೂ ಹೆಚ್ಚು ಮೌಲ್ಯದ ಮೊಬೈಲ್ ಫೋನ್ ಗಳು, ಬಟ್ಟೆ ಕಳ್ಳತನ ಮಾಡಿದ್ದಾನೆ.ಅಂಗಡಿ ಮಾಲೀಕ ರಂಗನಾಥ್ ಮರುದಿನ ಅಂಗಡಿಗೆ ಬಂದಾಗ, ಕೃತ್ಯ ಬೆಳಕಿಗೆ ಬಂದಿದೆ.ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story