Top

ಟೂರ್ನಿಯಿಂದ ಹೊರ ಬಿದ್ದ ಹಾಲಿಚಾಂಪಿಯನ್ ಮುಂಬೈ ಇಂಡಿಯನ್ಸ್

ಟೂರ್ನಿಯಿಂದ ಹೊರ ಬಿದ್ದ ಹಾಲಿಚಾಂಪಿಯನ್ ಮುಂಬೈ ಇಂಡಿಯನ್ಸ್
X

ಮುಂಬೈ: ಜೋಸ್ ಬಟ್ಲರ್ ಅವರ ಸ್ಪೋಟಕ ಬ್ಯಾಟಿಂಗ್‍ಗೆ ತಲೆಬಾಗಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 7 ವಿಕೆಟ್‍ಗಳ ಸೋಲನ್ನ ಅನುಭವಿಸಿ ಟೂರ್ನಿಯಿಂದ ಹೊರ ಬಂದಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆತಿಥೇಯ ಮುಂಬೈ ತಂಡ ನಿಗದಿತ ಓವರ್‍ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ತಂಡದ ಪರ ಆರಂಭಿಕ ಬ್ಯಾಟ್ಸ್‍ಮನ್ ಎವಿನ್ ಲಿವೀಸ್ 60, ಹಾರ್ದಿಕ್ ಪಾಂಡ್ಯ 36, ಸೂರ್ಯಕುಮಾರ್ ಯಾದವ್ 38 ರನ್ ಬಾರಿಸಿದ್ರು. ರಾಜಸ್ಥಾನ ಪರ ಜೋಫ್ರಾ ಆರ್ಚರ್ ಮತ್ತು ಬೆನ್‍ಸ್ಟೋಕ್ಸ್ ತಲಾ ಎರಡು ವಿಕೆಟ್ ಪಡೆದ್ರು. ಸವಾಲಿನ ಮೊತ್ತ ಬೆನ್ನತ್ತಿದ ರಾಜಸ್ಥಾನ ತಂಡಕ್ಕೆ ಆರಂಭಿಕ ಬ್ಯಾಟ್ಸ್‍ಮನ್ ಜೊಸ್ ಬಟ್ಲರ್ 53 ಎಸೆತದಲ್ಲಿ 9 ಬೌಂಡರಿ ಹಾಗೂ 5 ಸಿಕ್ಸರ್ ಸಿಡಿಸಿ ಅಜೇಯ 94 ರನ್ ಬಾರಿಸಿದ್ರು.ಕೊನೆಗೆ 18 ಓವರ್‍ನಲ್ಲಿ 3 ವಿಕೆಟ್ ನಷ್ಟಕ್ಕೆ 171 ರನ್ ಬಾರಿಸಿ ಗೆಲುವಿನ ನಗೆ ಬೀರಿ ಪ್ಲೇ ಆಫ್ ಆಸೆಯನ್ನ ಜೀವಂತವಾಗಿರಿಸಿಕೊಂಡಿತು.

Next Story

RELATED STORIES