Top

ಅಪಪ್ರಚಾರಕ್ಕೆ ಕರ್ನಾಟಕದ ಜನತೆ ಉತ್ತರ: ಮೋದಿ

ಅಪಪ್ರಚಾರಕ್ಕೆ ಕರ್ನಾಟಕದ ಜನತೆ ಉತ್ತರ: ಮೋದಿ
X

ಬಿಜೆಪಿ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದವರಿಗೆ ಕರ್ನಾಟಕದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ದೆಹಲಿಯಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ತಳಮಟ್ಟದಿಂದ ಕಾರ್ಯಕರ್ತರು ವಹಿಸಿದ ಶ್ರಮಕ್ಕೆ ಕರ್ನಾಟಕದಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದರು.

ಬಿಜೆಪಿ ವಿರುದ್ಧ ಹಲವಾರು ರೀತಿಯಲ್ಲಿ ಅಪಪ್ರಚಾರ ಮಾಡಲಾಯಿತು. ಆದರೆ ಪ್ರಜಾಪ್ರಬುತ್ವ ವ್ಯವಸ್ಥೆಯಲ್ಲಿ ಪಕ್ಷಕ್ಕೆ ನಿಜವಾದ ಯಶಸ್ಸು ಸಿಕ್ಕಿದೆ. ಪಶ್ವಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ವೇಳೆ ನಡೆದ ಘರ್ಷಣೆ ಪ್ರಜಾಪ್ರಭುತ್ವಕ್ಕೆ ಕಂಟಕವಾಗಿದೆ ಎಂದು ಮೋದಿ ಹೇಳಿದರು.

Next Story

RELATED STORIES