Top

ಜೆಡಿಎಸ್​ಗೆ ಕಾಂಗ್ರೆಸ್ ಬೆಂಬಲ: ಸಂಜೆ ಜಂಟಿ ಘೋಷಣೆ ಸುಳಿವು

ಜೆಡಿಎಸ್​ಗೆ ಕಾಂಗ್ರೆಸ್ ಬೆಂಬಲ: ಸಂಜೆ ಜಂಟಿ ಘೋಷಣೆ ಸುಳಿವು
X

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್, ಮೂರನೇ ಸ್ಥಾನ ಪಡೆದ ಜಾತ್ಯಾತೀತ ಜನತಾದಳ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದೆ.

ಅತಂತ್ರ ಫಲಿತಾಂಶ ಹೊರಬೀಳುತ್ತಿದ್ದಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿ.ಪರಮೇಶ್ವರ್, ಎಐಸಿಸಿ ಮಖಂಡ ಗುಲಾಂ ನಬಿ ಅಜಾದ್ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು.

ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದು, ಸಂಜೆ ವೇಳೆ ಕಾಂಗ್ರೆಸ್​ ನಿಯೋಗ ಭೇಟಿ ಮಾಡಿ ಮುಕ್ತವಾಗಿ ಮಾತುಕತೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಾತುಕತೆ ನಂತರ ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

Next Story

RELATED STORIES