Top

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಕೈ ಯತ್ನ: ಬಿಎಸ್​ವೈ

ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಕೈ ಯತ್ನ: ಬಿಎಸ್​ವೈ
X

ಕಾಂಗ್ರೆಸ್ ಪಕ್ಷ ಸೋಲುಂಡಿದ್ದರೂ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಿದೆ. ಇದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಯಡಿಯೂರಪ್ಪ, ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಪಡೆಯಲು ಯತ್ನಿಸುತ್ತಿರುವುದು ಖಂಡನೀಯ ಎಂದರು.

ರಾಜ್ಯದಲ್ಲಿ ಆಡಳಿತವಿರೋಧಿಯಿಂದ ಕಾಂಗ್ರೆಸ್ ಸೋಲುಂಡಿದೆ. ನಮ್ಮ ಪಕ್ಷಕ್ಕೆ ಹೆಚ್ಚಿನ ಸ್ಥಾನ ನೀಡಿದ ಮತದಾರರಿಗೆ ಅಭಿನಂದನೆ ಸಲ್ಲಿಸಿದರು.

Next Story

RELATED STORIES