ಕುಲದೀಪ್ ದಾಳಿಗೆ ರಾಯಲ್ಸ್ ಕಂಗಾಲು: ಕೆಕೆಆರ್ ಆಸೆ ಜೀವಂತ

X
TV5 Kannada16 May 2018 6:06 AM GMT
ಸ್ಪಿನ್ನರ್ ಕುಲದೀಪ್ ಯಾದವ್ ಮತ್ತು ವೇಗಿ ಆ್ಯಂಡ್ರೆ ರಸೆಲ್ ಅವರ ಮಾರಕ ದಾಳಿ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ಗಳಿಂದ ಮಣಿಸಿದೆ. ಈ ಮೂಲಕ ಕೆಕೆಆರ್ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ 19 ಓವರ್ ಗಳಲ್ಲಿ 142 ರನ್ಗಳಿಗೆ ಆಲೌಟಾಯಿತು. ಸುಲಭ ಗುರಿ ಬೆಂಬತ್ತಿದ ಕೆಕೆಆರ್ 2 ಓವರ್ ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಈ ಗೆಲುವಿನೊಂದಿಗೆ 13 ಪಂದ್ಯಗಳಿಂದ 7 ಜಯದೊಂದಿಗೆ 14 ಅಂಕ ಸಂಪಾದಿಸಿ ಮೂರನೇ ಸ್ಥಾನಕ್ಕೆ ಲಗ್ಗೆ ಹಾಕಿತು.
ಕುಲದೀಪ್ 20 ರನ್ಗೆ 4 ವಿಕೆಟ್ ಪಡೆದರು. ಈ ಋತುವಿನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರು.
Next Story