Top

ನಾಳೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ?

ನಾಳೆ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ?
X

ಬಿಜೆಪಿ ಮುಖಂಡ ಬಿ.ಎಸ್​.ಯಡಿಯೂರಪ್ಪ ಅವರಿಗೆ ಸರಕಾರ ರಚನೆಗೆ ರಾಜ್ಯಪಾಲ ವಾಜೂಬಾಯ್ ವಾಲಾ ಅಹ್ವಾನಿಸಿದ್ದು, ವಿಶ್ವಾಸಮತ ಸಾಬೀತುಪಡಿಸಲು 11 ದಿನಗಳ ಅವಕಾಶ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯಪಾಲರನ್ನು ಬುಧವಾರ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿಗೆ ಸರಕಾರ ರಚನೆಗೆ ಅವಕಾಶ ನೀಡಿದ್ದಾರೆ ಎಂದರು.

ನಾಳೆ ಬೆಳಗ್ಗೆ 11 ಗಂಟೆಗೆ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ರಾಜ್ಯಪಾಲರು ನೀಡಿದ 11 ದಿನಗಳ ಗಡುವಿನೊಳಗೆ ಬಹುಮತ ಸಾಬೀತುಪಡಿಸುವುದಾಗಿ ಯಡಿಯೂರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅನಂತ್ ಕುಮಾರ್​, ಕೆ.ಎಸ್​.ಈಶ್ವರಪ್ಪ, ಜಾವ್ಡೆಕರ್​ ಮುಂತಾದವರು ಉಪಸ್ಥಿತರಿದ್ದರು.

Next Story

RELATED STORIES