Top

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ರಾಹುಲ್​, ಶಾ ವಾಕ್ಸಮರ

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ರಾಹುಲ್​, ಶಾ ವಾಕ್ಸಮರ
X

ಬಹುಮತ ಇಲ್ಲದೇ ಇದ್ದರೂ ಬಿಜೆಪಿ ಹಿಂಬಾಗಿಲ ಮೂಲಕ ಸರಕಾರ ರಚನೆ ಮಾಡಿದೆ. ಇದು ಪ್ರಜಾಪ್ರಭುತ್ವದ ಕೊಲೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಆದರೆ ಇದರ ಬೆನ್ನಲ್ಲೇ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಇತಿಹಾಸ ಗೊತ್ತಿಲ್ಲದೇ ಮಾತನಾಡುತ್ತಿದ್ದಾರೆ ಎಂದಿದ್ದಾರೆ.

ರಾಯಪುರದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಗೆ ಸರಕಾರ ರಚನೆಗೆ ಬಹುಮತವೇ ಇಲ್ಲ. ಆದರೂ ಸರಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದಾರೆ. ಭಾರತದ ಪ್ರಜಾಪ್ರಭುತ್ವ ಪಾಕಿಸ್ತಾನದಂತೆ ಆಗಿಬಿಟ್ಟಿದೆ. ಶಾಸಕರನ್ನು ಬೆದರಿಸಿ ಕುದುರೆ ವ್ಯಾಪಾರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

Next Story

RELATED STORIES