Top

1 ಲಕ್ಷದವರೆಗಿನ ರೈತರ ಸಾಲಮನ್ನ ಇನ್ನೆರಡು ದಿನದಲ್ಲಿ ಘೋಷಣೆ: ಬಿಎಸ್​ವೈ

1 ಲಕ್ಷದವರೆಗಿನ ರೈತರ ಸಾಲಮನ್ನ ಇನ್ನೆರಡು ದಿನದಲ್ಲಿ ಘೋಷಣೆ: ಬಿಎಸ್​ವೈ
X

ಬೆಂಗಳೂರು : ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ರಾಷ್ಟ್ರೀಯ ಬ್ಯಾಂಕ್ ಹಾಗೂ ಸೊಬೈಟಿಗಳಲ್ಲಿ ಮಾಡಿದ್ದ ರೈತರ ಸಾಲ ಮನ್ನಾವನ್ನು ನೂತನ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನ ಭರವಸೆ ನೀಡಿದ್ದೆ. ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಅಧಿಕೃತ ಘೋಷಣೆ ಮಾಡಲಿದ್ದೇನೆ ಎಂದರು.

ನಾವು ವಿಶ್ವಾಸಮತ ಸಾಬೀತುಪಡಿಸಿದ ನಂತರ ಸೂಕ್ತ ದಿನಾಂಕ ನಿಗದಿಮಾಡಿ ಸಂಪುಟ ವಿಸ್ತರಣೆ ಮಾಡಲಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಿದ್ದೇವೆ. ಬೃಹತ್ ಸಮಾರಂಭ ಆಯೋಜಿಸಲು ತೀರ್ಮಾನಿಸಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಜೆಡಿಎಸ್​-ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಬೇಕು. ನಮ್ಮ ಸರಕಾರಕ್ಕೆ ಬೆಂಬಲ ನೀಡಬೇಕು. ವಿಶ್ವಾಸಮತ ಸಾಬೀತುಪಡಿಸಲು 15 ದಿನ ಬೇಕಾಗಿಲ್ಲ. ಅದಕ್ಕೂ ಮುನ್ನವೇ ಸಾಬೀತುಪಡಿಸಲಾಗುವುದು ಎಂದು ಬಿಎಸ್​ವೈ ಸ್ಪಷ್ಟಪಡಿಸಿದರು.

Next Story

RELATED STORIES