Top

ಬಾಗಲಕೋಟೆಯಲ್ಲಿ ರಾಜ್ಯಪಾಲರ ನಿಲುವಿಗೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬಾಗಲಕೋಟೆಯಲ್ಲಿ ರಾಜ್ಯಪಾಲರ ನಿಲುವಿಗೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
X

ಬಾಗಲಕೋಟೆ : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಹಾಗೂ ರಾಜ್ಯಪಾಲರ ನಡೆ ಖಂಡಿಸಿ ಬಾಗಲಕೋಟೆ ಬಸವೇಶ್ವರ ಸರ್ಕಲ್‌ನಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಪಕ್ಷದವರಿಗೆ ಬಹುಮತವಿಲ್ಲ. ಹೀಗಿದ್ದರೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸಲು ರಾಜ್ಯಪಾಲ ವಜುಬಾಯಿ ವಾಲಾ ಆಹ್ವಾನ ನೀಡಿದ್ದ ಕ್ರಮವನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ರಾಜ್ಯಪಾಲರು ವರ್ತಿಸಿದ್ದಾರೆಂದು ಆರೋಪಿಸಿದ ಪ್ರತಿಭಟನಾಕಾರರು, ಬಸವೇಶ್ವರ ಸರ್ಕಲ್ ನಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇನ್ನು ಪ್ರತಿಭಟನೆಯುದ್ದಕ್ಕೂ ಬಿಜೆಪಿ ಪಕ್ಷ ಹಾಗೂ ನರೇಂದ್ರ ಮೋದಿ ವಿರುದ್ದ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಇದೊಂದು ಅಸಂವಿಧಾನದ ಮಾರ್ಗವಾಗಿದೆ ಎಂದು ಟೀಕಿಸಿದರು.

Next Story

RELATED STORIES