Top

ಬಿಎಸ್​ವೈ ಪ್ರಮಾಣವಚನ: ತಡೆ ನೀಡಲು ಸುಪ್ರೀಂ ನಕಾರ

ಬಿಎಸ್​ವೈ ಪ್ರಮಾಣವಚನ: ತಡೆ ನೀಡಲು ಸುಪ್ರೀಂ ನಕಾರ
X

ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲ ಇಲ್ಲದೇ ಇದ್ದರೂ ಸರಕಾರ ರಚನೆಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಆದರೆ ಪ್ರಕರಣ ಕುರಿತು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ರಾಜ್ಯಪಾಲ ವಾಜೂಬಾಯಿ ಪಟೇಲ್ ಅವರು ಸಂಖ್ಯಾಬಲದ ಕೊರತೆ ಇದ್ದರೂ ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 9 ಗಂಟೆಗೆ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದರು.

ಆದರೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತಡೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎ.ಕೆ.ಸಿಕ್ರಿ, ನ್ಯಾಯಮೂರ್ತಿ ಎಸ್​.ಎ.ಬೊಬ್ಡೆ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ, ರಾಜ್ಯಪಾಲರಿಗೆ ಹಾಗೂ ಸರಕಾರಕ್ಕೆ ವಿವರಣೆ ಕೋರಿ ನೋಟೀಸ್ ಜಾರಿ ಮಾಡಿದೆ.

Next Story

RELATED STORIES