Top

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ವೈ

ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿರುವ ಬಿಎಸ್ ವೈ
X

ಕೊನೆಗೂ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ಫಿಕ್ಸ್ ಆಗಿದೆ. ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲು, ರಾಜಭವನದಿಂದ ಅಧಿಕೃತ ಆಹ್ವಾನ ಬಂದಿದೆ. ಈ ಮೂಲಕ ಕಮಲ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಇಂದು ಬಿಎಸ್ ಯಡಿಯೂರಪ್ಪ ರಾಜಭವನದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆ ನಡೆದಿದ್ದು, ಇನ್ನು ಬಹುಮತ ಸಬೀತುಪಡಿಸಲು 15ದಿನ ಕಾಲಾವಕಾಶ ನೀಡಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿದ ಬಿಎಸ್ ವೈ, ಗುರುವಾರದಂದು ಬೆಳಗ್ಗೆ 9ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ.ರಾಜಭವನದಲ್ಲಿ ಗೌರವಾನ್ವಿತ ರಾಜ್ಯಪಾಲ ವಜುಭಾಯಿ ವಾಲಾರವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.ನಾಡಿನ ಜನತೆ ಶುಭಹಾರೈಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದಿದ್ದಾರೆ.

Next Story

RELATED STORIES