Top

ಪ್ರಜಾಪ್ರಭುತ್ವದ ಐತಿಹಾಸಿಕ ತೀರ್ಪು: ಸಿಂಘ್ವಿ ಬಣ್ಣನೆ

ಪ್ರಜಾಪ್ರಭುತ್ವದ ಐತಿಹಾಸಿಕ ತೀರ್ಪು: ಸಿಂಘ್ವಿ ಬಣ್ಣನೆ
X

ನಾಳೆ ಸಂಜೆ 4 ಗಂಟೆಗೆ ಬಹುಮತ ಸಾಬೀತಪಡಿಸಿ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾದುದು ಎಂದು ಕಾಂಗ್ರೆಸ್​- ಜೆಡಿಎಸ್ ಪರ ವಾದ ಮಂಡಿಸಿದ ಅಭಿಷೇಕ್​ ಮನು ಸಿಂಘ್ವಿ ಅಭಿಪ್ರಾಯಪಟ್ಟಿದ್ದಾರೆ.

ಬಹುಮತದ ಕೊರತೆ ಇದ್ದರೂ ಅತೀ ದೊಡ್ಡ ಪಕ್ಷ ಎಂಬ ಕಾರಣಕ್ಕೆ ಬಿಜೆಪಿ ಪಕ್ಷವನ್ನು ಸರಕಾರ ರಚನೆಗೆ ಆಹ್ವಾನಿಸಿದ ರಾಜ್ಯಪಾಲ ವಾಜೂಬಾಯಿ ವಾಲಾ ಅವರ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು.

ನಾಳೆ ಸಂಜೆ 4 ಗಂಟೆಗೆ ಸುಪ್ರೀಂಕೋರ್ಟ್ ಬಹುಮತ ಸಾಬೀತಗೆ ಸೂಚಿಸಲಾಗಿದೆ. ಅಲ್ಲಿಯವರೆಗೂ ಯಡಿಯೂರಪ್ಪ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ ಎಂದು ಸಿಂಘ್ವಿ ವಿವರಿಸಿದರು.

Next Story

RELATED STORIES