Top

25ನೇ ಸಿಎಂ ಆಗಿ ಹೆಚ್.ಡಿ.ಕುಮಾರಸ್ವಾಮಿ ಸೋಮವಾರ ಪ್ರಮಾಣವಚನ

ಬೆಂಗಳೂರು : ರಾಜ್ಯದಲ್ಲಿ 25 ನೇ ಮುಖ್ಯಮಂತ್ರಿಯಾಗಿ ಹೆಚ್.ಡಿ ಕುಮಾರ ಸ್ವಾಮಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕಾರ ಮಾಡುವುದಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದು ನಡೆದ ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಪಕ್ಷದ ನಾಯಕ ಬಿ.ಎಸ್ವೈ ಅವರು ಸದನಲ್ಲಿ ಬಹುಮತವನ್ನು ಯಾಚನೆ ಮಾಡದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಬಹು ನಿರೀಕ್ಷಿತ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರಕ್ಕೆ ವೇದಿಕೆ ಸಿದ್ದವಾಗಿದೆ.

ರಾಜ್ಯಪಾರ ಭೇಟಿಯ ಬಳಿಕ ಈ ಮಾಹಿತಿ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಸೋಮವಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ನಾಳೆ ಪ್ರಮಾಣವಚನ ಸಮಾರಂಭ ಎಲ್ಲಿ ನಡೆಯಲಿದೆ ಎಂದು ತಿಳಿಸಲಾಗುತ್ತದೆ ಎಂದು ಹೇಳಿದರು.

Next Story

RELATED STORIES