Top

ಮೂರೇ ದಿನಕ್ಕೆ ಮುಗಿಯಿತು ಬಿಎಸ್​ವೈ ಅಧಿಕಾರ: ಸಿಎಂ ಸ್ಥಾನಕ್ಕೆ ರಾಜೀನಾಮೆ

ಮೂರೇ ದಿನಕ್ಕೆ ಮುಗಿಯಿತು ಬಿಎಸ್​ವೈ ಅಧಿಕಾರ: ಸಿಎಂ ಸ್ಥಾನಕ್ಕೆ ರಾಜೀನಾಮೆ
X

ಬೆಂಗಳೂರು : ನಮ್ಮ ಸರಕಾರ ಸಂಖ್ಯಾಬಲದ ಕೊರತೆ ಎದುರಿಸುತ್ತಿದೆ. ಹಾಗಾಗಿ ನಾನು ತತ್​​ಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಬಿ.ಎಸ್.ಯಡಿಯೂರಪ್ಪ ವಿಧಾನಸಭೆ ಅಧಿವೇಶನದಲ್ಲಿ ಪ್ರಕಟಿಸುವ ಮೂಲಕ ಬಿಜೆಪಿ ಸರಕಾರ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ. ಇದು ರಾಜ್ಯದ ಇತಿಹಾಸದಲ್ಲೇ ಅತೀ ಕಡಿಮೆ ಅವಧಿ ಬಾಳಿದ ಸರ್ಕಾರವಾಗಿದೆ.

ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಶನಿವಾರ ಸಂಜೆ 4 ಗಂಟೆಯೊಳಗೆ ಬಹುಮತ ಸಾಬೀತಪಡಿಸಬೇಕಿತ್ತು. ಆದರೆ ಮಧ್ಯಾಹ್ನ ಅಧಿವೇಶನದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ, ಕಾಂಗ್ರೆಸ್ ಕುತಂತ್ರದಿಂದ ನಮಗೆ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲ ದೊರೆಯಲಿಲ್ಲ. ಆದ್ದರಿಂದ ಕೂಡಲೇ ರಾಜ್ಯಪಾಲರ ಬಳಿ ತೆರಳಿ ರಾಜೀನಾಮೆ ನೀಡುತ್ತೇನೆ ಎಂದು ಘೊಷಿಸಿದರು.

Next Story

RELATED STORIES