Top

ಸೋಲಿನ ಪರಾಮರ್ಶೆಗೆ ಮುಂದಾದ ಬಿಜೆಪಿ

ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಬಿ.ಎಸ್​.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೋಲಿನ ಪರಾಮರ್ಶೆಗೆ ಮುಂದಾಗಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ಬುಧವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ಪರಾಮರ್ಶೆ ಮಾಡಲಾಗುವುದು ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಸೋತ ಪಕ್ಷದ ಅಭ್ಯರ್ಥಿಗಳ ಜೊತೆ ಯಡಿಯೂರಪ್ಪ ಚರ್ಚೆ ನಡೆಸಲಿದ್ದು, ಸೋತವರಿಗೆ ಧೈರ್ಯ ತುಂಬಿ ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಆತ್ಮ ವಿಶ್ವಾಸ ತುಂಬಿಸಿ ಕಳಿಸುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯತ್ತ ಗಮನ ಹರಿಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

Next Story

RELATED STORIES