Top

ಖಾತೆ ಹಂಚಿಕೆ: ಸೋನಿಯಾ ಜೊತೆ ಕಾಂಗ್ರೆಸ್ ಮುಖಂಡರು ಚರ್ಚೆ

ಖಾತೆ ಹಂಚಿಕೆ: ಸೋನಿಯಾ ಜೊತೆ ಕಾಂಗ್ರೆಸ್ ಮುಖಂಡರು ಚರ್ಚೆ
X

ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರಕಾರ ರಚನೆಗೆಹಸಿರುನಿಶಾನೆ ದೊರೆತ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಮುಖಂಡರು ಖಾತೆ ಹಂಚಕೆ ಕುರಿತು ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಲು ನಾಳೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಬುಧವಾರ ಸಿಎಂ ಆಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಂದರ್ಭದಲ್ಲಿ ಕಾಂಗ್ರೆಸ್​ನ ಎಷ್ಟು ಶಾಸಕರಿಗೆ ಸಚಿವ ಸ್ಥಾನ ನೀಡುವುದು, ಯಾರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವುದು ಹಾಗೂ ಖಾತೆ ಹಂಚಿಕೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ನಾಳೆ ಕುಮಾರಸ್ವಾಮಿ‌ ಕೂಡ ಕಾಂಗ್ರೆಸ್ ಮುಖಂಡರ ಜೊತೆ ದೆಹಲಿಗೆ ಪ್ರಯಾಣಿಸಲಿದ್ದಾರೆ. ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದ್ಉದ, ಡಿ.ಕೆ.ಶಿವಕುಮಾರ್​ ಅವರಿಗೆ ಯಾವ ಸ್ಥಾನ ನೀಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Next Story

RELATED STORIES