Top

ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು : ಡಿವಿ ಸದಾನಂದಗೌಡ

ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು : ಡಿವಿ ಸದಾನಂದಗೌಡ
X

ಮಂಡ್ಯ : ಕಾಂಗ್ರೆಸ್, ಜೆಡಿಎಸ್ ಮೈತ್ರಿ ವಿರುದ್ಧ ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ವಾಗ್ಧಾಳಿ ನಡೆಸಿದರು. ಈ ಕುರಿತು ಸಕ್ಕರೆ ನಾಡಿನಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಇರಬಾರದೆಂದು ಜನ ಬಿಜೆಪಿ ಗೆ ಆಶೀರ್ವಾದ ಮಾಡಿದ್ದರು ಎಂದು ಹೇಳಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಜೆಡಿಎಸ್, ಬಿಜೆಪಿ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಬಿಜೆಪಿ ಪ್ರಯತ್ನ ಮಾಡುತ್ತದೆ. ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಮಾಡಿದ್ದಾರೆ. ಈ ಕುರಿತು ಆಡಿಯೋ, ವೀಡಿಯೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಈ ಬಗ್ಗೆ ತನಿಖೆ ನಡೆಯಲಿ. ಈ ಮೂಲಕ ಇವೆಲ್ಲ ಫೇಕ್ ಎಂಬುದು ರಾಜ್ಯದ ಜನರಿಗೆ ಗೊತ್ತಾಗಲಿ ಎಂದರು.

ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು. ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು ಅಧಿಕಾರಕ್ಕೆ ಒಂದಾದ್ರು. ಕಾಂಗ್ರೆಸ್ ಜೊತೆ ಜೆಡಿಎಸ್ ಹೋಗಲ್ಲ ಅನ್ಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಹೊಂದಾದ್ರು. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡ್ಲಿಲ್ಲ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಸ್ಪಷ್ಟಪಡಿಸಿದರು.

Next Story

RELATED STORIES