Top

ಸಿಎಂ ಸ್ಥಾನ, ಖಾತೆ ಹಂಚಿಕೆ 50-50 ಇಲ್ಲ: ಕುಮಾರಸ್ವಾಮಿ

ಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಒಪ್ಪಂದ ಆಗಿಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದಿಷ್ಟ ಅವಧಿಗೆ ತಾನು ಮುಖ್ಯಮಂತ್ರಿ ಆಗಿ ನಂತರ ಕಾಂಗ್ರೆಸ್​ಗೆ ಬಿಟ್ಟುಕೊಡುವ ಬಗ್ಗೆ ಮಾತುಕತೆ ಆಗಿಲ್ಲ. ಅಲ್ಲದೇ ಖಾತೆ ಹಂಚಿಕೆಯಲ್ಲೂ 50:50ರ ಅನುಪಾತದಲ್ಲಿ ಹಂಚಿಕೆ ಆಗಬೇಕೆಂಬ ಬಗ್ಗೆಯೂ ಚರ್ಚೆ ಆಗಿಲ್ಲ ಎಂದರು.

Next Story

RELATED STORIES