Top

ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ: ಶೋಭಾ ಕರಂದ್ಲಾಜೆ

ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ: ಶೋಭಾ ಕರಂದ್ಲಾಜೆ
X

ಮೈಸೂರು: ರಾಜ್ಯದಲ್ಲಿರುವುದು ನಕಲಿ ಕಾಂಗ್ರೆಸ್‌. ಉಗ್ರಪ್ಪ ಬಿಡುಗಡೆ ಮಾಡಿರೋದು ಸಹ ನಕಲಿ ಸಿಡಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್‌ಗೆ ರಾಜ್ಯದ ಜನ ಆಶೀರ್ವಾದ ಮಾಡಿಲ್ಲ. ಆದರೂ ಜೆಡಿಎಸ್ ಜೊತೆ ಹಿಂಬಾಗಿಲಿನಿಂದ ಅಧಿಕಾರ ಹಿಡಿದು ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಆದರೆ ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಅಂತ ಭವಿಷ್ಯ ನುಡಿದರು. ಈ ಸಂದರ್ಭದಲ್ಲಿ ಪ್ರೀತಂ ಗೌಡರಂತಹ ಯುವನಾಯಕರನ್ನು ಹುಡುಕಿ ನಾವು ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಶ್ಲಾಘಿಸಿದ ಶೋಭಾ ಕರಂದ್ಲಾಜೆ, ಹಳೆ ಮೈಸೂರು ಹಾಗೂ ರಾಜ್ಯಾದ್ಯಂತ ಮತ್ತೆ ಪ್ರವಾಸವನ್ನು ಮಾಡುತ್ತೇವೆ. ಮತ್ತೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ತನ್ನ ಪತ್ನಿಗೆ ಯಾವುದೇ ರೀತಿಯ ಆಮೀಷಗಳು ಬಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಬಣ್ಣವನ್ನು ಬಯಲು ಮಾಡಿದ್ದಾರೆ. ವಿಜಯಪುರದಲ್ಲಿ ಸಿಕ್ಕಿದ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದ ಅವರು, ಯಡಿಯೂರಪ್ಪ ಒಂಟಿಯಾಗಿಲ್ಲ ನಾವು ಶೀಘ್ರದಲ್ಲೆ ಮತ್ತೆ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದರು.

Next Story

RELATED STORIES