Top

ಪ್ರಮಾಣವಚನ ಕಾರ್ಯಕ್ರಮಕ್ಕೆ ಬರ್ತಾರಾ ಕಮಲ್?

ಪ್ರಮಾಣವಚನ ಕಾರ್ಯಕ್ರಮಕ್ಕೆ  ಬರ್ತಾರಾ ಕಮಲ್?
X

ನಾಳೆ ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದು, ವಿಧಾನಸೌಧದ ಮುಂಭಾಗ ಭರದ ಸಿದ್ಧತೆ ನಡೆದಿದೆ. ಇನ್ನು ಈ ಕಾರ್ಯಕ್ರಮದಲ್ಲಿ ನಟ ಕಮಲ್ ಹಾಸನ್ ಭಾಗಿಯಾಗಲಿದ್ದಾರೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ತಮಿಳುನಾಡಿನ ಮಕ್ಕಳ್ ನೀತಿ ಮಯ್ಯಂ ಪಕ್ಷದ ರಾಜ್ಯಾಧ್ಯಕ್ಷ ಕಮಲ್ ಹಾಸನ್ ನಿಯೋಜಿತ ಮುಖ್ಯಮಂತ್ರಿಗೆ ದೂರವಾಣಿ ಕರೆ ಮಾಡುವ ಮೂಲಕ, ಪ್ರಾದೇಶಿಕ ಪಕ್ಷದ ನಾಯಕರೊಬ್ಬರು ಸಿಎಂ ಆಗುತ್ತಿರುವುದು ಸಂತಸ ತಂದಿದೆ. ನಿಮಗೆ ಶುಭವಾಗಲಿ ಎಂದು ಶುಭಕೋರಿದ್ದರು.ಈ ವೇಳೆ ಹೆಚ್ಡಿಕೆ ಪ್ರಮಾಣವಚನ ಕಾರ್ಯಕ್ರಮಕ್ಕೆ ನಟ ಕಮಲ್ ಹಾಸನ್ ಬರುವುದಾಗಿ ಹೇಳಿದ್ದಾರೆನ್ನಲಾಗಿದೆ.

Next Story

RELATED STORIES