Top

ನಿಫಾ ಆತಂಕ: ಪ್ರವಾಸಿಗರ ಮೇಲೆ ಕರ್ನಾಟಕ ನಿಗಾ

ನಿಫಾ ಆತಂಕ: ಪ್ರವಾಸಿಗರ ಮೇಲೆ ಕರ್ನಾಟಕ ನಿಗಾ
X

ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಲ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಕೂಡ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ 18 ದಿನಗಳ ಕಾಲ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲು ನಿರ್ಧರಿಸಿದೆ.

ಮಂಗಳೂರಿನಲ್ಲಿ ಶಂಕಿತ ನಿಫಾ ಸೋಂಕು ಇಬ್ಬರಲ್ಲಿ ಪತ್ತೆಯಾಗಿದ್ದು, ಇದರಲ್ಲಿ ಒಬ್ಬರು ಕೇರಳ ಮೂಲದವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಪ್ರವಾಸಕ್ಕೆ ಹೋಗಿ ಹಿಂತಿರುಗುವವರು ಹಾಗೂ ಕೇರಳದಿಂದ ಪ್ರವಾಸಕ್ಕೆ ಆಗಮಿಸುವವರ ಮೇಲೆ ನಿಗಾ ವಹಿಸಲಾಗಿದ್ದು, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಪರೀಕ್ಷೆಗೆ ಚಿಂತನೆ ನಡೆಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ನಿಗಾ ವಹಿಸಲಾಗಿದೆ ಎಂದು ನಿರ್ದೆಶಕ ನಾಗರಅಜ್ ತಿಳಿಸಿದ್ದಾರೆ.

Next Story

RELATED STORIES