Top

ಪ್ರಮಾಣವಚನ ಸಮಾರಂಭಕ್ಕೆ ಯಾರ್ಯಾರು ಬರಲಿದ್ದಾರೆ ಗೊತ್ತಾ ?

ಸದ್ಯ ನಿಯೋಜಿತ ಸಿಎಂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿ, ರಾಜ್ಯದ 25ನೇ ಮುಖ್ಯಮಂತ್ರಿಯಾಗಲಿದ್ದಾರೆ. ಬೆಂಗಳೂರಿನ ಶಕ್ತಿಸೌಧದಲ್ಲಿ ನಡೆಯುವ ಈ ಅದ್ಧೂರಿ ಸಮಾರಂಭಕ್ಕೆ ಗಣ್ಯಾತಿ ಗಣ್ಯರ ದಂಡೇ ಆಗಮಿಸಲಿದೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯ್ ವಿಜಯನ್ , ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಸಚಿವ ಕೆ.ಟಿ.ರಾಮರಾವ್, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ನಟರಾದ ಕಮಲ್ ಹಾಸನ್, ಪವನ್ ಕಲ್ಯಾಣ್, ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್, ನವೀನ್ ಪಟ್ನಾಯಕ್ ಮತ್ತಿತರರು ಉಪಸ್ಥಿತರಿರುತ್ತಾರೆ. ಇನ್ನು ವಿಧಾನಸೌಧದ ಮುಂಭಾರ ಸಿದ್ಧತೆ ಜೋರಾಗಿದೆ. 11 ಎಲ್.ಸಿ.ಡಿಗಳ ವ್ಯವಸ್ಥೆ ಮಾಡಲಾಗಿದೆ.ಕಾರ್ಯಕರ್ತರಿಗೆ 80 ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಗಣ್ಯಾತಿಗಣ್ಯರಿಗೆ ವಿಶೇಷ ಆಸನದ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ ನಾಯಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.

Next Story

RELATED STORIES