Top

ನಾಳೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ : ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಕೆ

ನಾಳೆ ಸ್ಪೀಕರ್ ಸ್ಥಾನಕ್ಕೆ ಚುನಾವಣೆ : ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ನಾಮಪತ್ರ ಸಲ್ಲಿಕೆ
X

ಬೆಂಗಳೂರು : ನಾಳೆ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್‌ನಿಂದ ರಮೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ವಿರೋಧ ಪಕ್ಷವಾದ ಬಿಜೆಪಿಯಿಂದ ಶಾಸಕ ಸುರೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬಿಜೆಪಿಯ ಶಾಸಕ ಸುರೇಶ್ ಕುಮಾರ್, ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಪಕ್ಷದ ರಾಜ್ಯಾಧ್ಯಕ್ಷರ ಸೂಚನೆಯಂತೆ ನಾಮಪತ್ರ ಸಲ್ಲಿಸಿದ್ದೇನೆ. ನಾಳೆ ಚುನಾವಣೆ ಇದೆ. ಏನಾಗೋತ್ತೋ ನೋಡೋಣ. ನಮಗೆ ಸಂಖ್ಯಾಬಲ ಇದೆ, ಕಾದುನೋಡಿ ಎಂದು ಹೇಳಿದರು.

ಇನ್ನೂ ಕಾಂಗ್ರೆಸ್‌ನಿಂದ ಶಾಸಕ ರಮೇಶ್ ಕುಮಾರ್, ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ತೆರಳಿ, ತಮ್ಮ ನಾಮಪತ್ರವನ್ನು ಕಾರ್ಯದರ್ಶಿ ಎಸ್ ಮೂರ್ತಿಗೆ ಸಲ್ಲಿಸಿದರು. ಇವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಹೆಚ್.ಮುನಿಯಪ್ಪ ಸಾಥ್ ನೀಡಿದರು.

Next Story

RELATED STORIES